ಅಪಘಾತ ಹಾಗೂ ಆರೋಗ್ಯ ವಿಮೆ ಸವಲತ್ತು ಪಡೆಯುವ ಅವಕಾಶ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ, ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಅಪಘಾತ ಹಾಗೂ ಆರೋಗ್ಯ ವಿಮೆ ಶಿಬಿರವು ನ. 16ರಂದು ಮೂಡುಬಿದಿರೆಯ ಕನ್ನಡ ಭವನದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ 4-00 ಗಂಟೆಯವರೆಗೆ ನಡೆಯಲಿದೆ.
ಸಾರ್ವಜನಿಕರು ಸಮರ್ಪಕ ಮೂಲ ದಾಖಲೆಗಳೊಂದಿಗೆ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.





