ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ನಾಳೆ (ಜೂನ್ 3) ಸಂಜೆ 4:05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸರಳವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ. ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಅತಿಥಿಗಳಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಆಡಂಬರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ಸಂಜೆ 4.05ಕ್ಕೆ ನೆರವೇರಲಿದ್ದು, ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.





