ವೇಣೂರು: ಬಜಿರೆ ಪಿಯಂಶ್ರೀ ಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ ಸಮಾರಂಭದಲ್ಲಿ ಶಾಲೆಯ ಎಸ್ಡಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಪಿ. ಅವರನ್ನು ಶಾಲೆ ವತಿಯಿಂದ ಜೂ. 1ರಂದು ಸನ್ಮಾನಿಸಿ ಗೌರವಿಸಲಾಯಿತು.
ಸುಮಾರು 4 ವರ್ಷಗಳ ಕಾಲ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿದ್ದುಕೊಂಡು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು. ಅವರ ಸೇವೆಯನ್ನು ಸ್ಮರಿಸಿ ಶಾಲೆಯ ಮೇಲುಸ್ತುವಾರಿ ಸಮಿತಿ ಸನ್ಮಾನಿಸಿ ಗೌರವಿಸಿದೆ. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಶಾಲೆಯ ಪ್ರಭಾರಮುಖ್ಯ ಶಿಕ್ಷಕಿ ರಶ್ಮಿ ಶೆಟ್ಟಿ, ಪ್ರಮುಖರಾದ ಅರುಣ್ ಕ್ರಾಸ್ತ, ಶಿವಾನಂದ ಗೌಡ, ಎಸ್ಡಿಎಂಸಿ ಅಧ್ಯಕ್ಷೆ ಜಯಶ್ರೀ, ಲೋಕೇಶ್ ಕೋರ್ಲೋಡಿ ಮತ್ತಿತರರು ಉಪಸ್ಥಿತರಿದ್ದರು.





