ಮೂಡುಬಿದಿರೆ: ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನದ ನಾಲ್ಕನೇ ಆವೃತ್ತಿಯ ‘ಅತ್ಯುತ್ತಮ ನಿರ್ದೇಶನ’ ವಿಭಾಗಕ್ಕೆ ‘ರಿಪ್ಪನ್ ಸ್ವಾಮಿ’ ಚಿತ್ರದ ನಿರ್ದೇಶನಕ್ಕಾಗಿ ಕಿಶೋರ್ ಮೂಡುಬಿದಿರೆ ನಾಮನಿರ್ದೇಶನಗೊಂಡಿದ್ದಾರೆ.
ಸುಮಾರು ಒಂದೂವರೆ ದಶಕಗಳಿಂದ ಚಲನಚಿತ್ರ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಕಿಶೋರ್ ಮೂಡುಬಿದಿರೆ, 12 ತುಳು ಸಿನಿಮಾಗಳಲ್ಲಿ ಸಹ ಮತ್ತು ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. 2020ರಲ್ಲಿ ವಿಜಯ್ ರಾಘವೇಂದ್ರ ಅಭಿನಯದ ‘ಮಾಲ್ಗುಡಿ ಡೇಸ್ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಂಡ ಅವರು. ಬಳಿಕ ‘ಅಪ್ಪೆ ಟೀಚರ್’ ಹಾಗೂ ‘ರಿಪ್ಪನ್ ಸ್ವಾಮಿ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಸಿನಿ ಸಮ್ಮಾನದ ವಿವಿಧ ವಿಭಾಗಗಳ ನಾಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿಜೇತರನ್ನು ಚಿತ್ರರಂಗದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರ ಮತದಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.



