ವೇಣೂರು: ಮುಚ್ಚೂರು ಗ್ರಾಮ ಪಂಚಾಯತ್ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇದೀಗ ಅಂಡಿಂಜೆ ಗ್ರಾ.ಪಂ.ಗೆ ವರ್ಗಾವಣೆಗೊಂಡಿರುವ ಸತೀಶ್ ಕುಮಾರ್ ಅವರನ್ನು ಮಂಗಳೂರು ತಾಲೂಕು ಪಂಚಾಯತ್ ವತಿಯಿಂದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳರವರ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಅಬೂಬಕ್ಕರ್, ಸುವರ್ಣ ಜಿ. ಹೆಗ್ಡೆ ವ್ಯವಸ್ಥಾಪಕರು, ಪರಮೇಶ್ವರ್ ಲೆಕ್ಕ ಸಹಾಯಕರು ಹಾಗೂ ತಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.
ಸತೀಶ್ ಕುಮಾರ್ ಅವರು ಹೊಸಂಗಡಿ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.



