ವೇಣೂರು: ಜೀವಗಳನ್ನು ಉಳಿಸಲು ಮತ್ತು ಉತ್ತಮಗೊಳಿಸಲು ಬದ್ಧರಾಗಿರುವ ದೇಶದ ವೈದ್ಯರು ಮತ್ತು ಆರೋಗ್ಯ ವೃತ್ತಿಪರರನ್ನು ಗೌರವಿಸಲು ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೇಣೂರು ವ್ಯಾಪ್ತಿಯ ವೈದ್ಯರನ್ನು ಭೇಟಿ ಮಾಡಿ, ವೈದ್ಯರ ದಿನದ ಶುಭಾಶಯಗಳನ್ನು ಕೋರುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿದರು.
ಭಾರತ ಸರ್ಕಾರವು 1991 ರಲ್ಲಿ ಜುಲೈ 1 ಅನ್ನು ರಾಷ್ಟ್ರೀಯ ವೈದ್ಯರ ದಿನವೆಂದು ಅಧಿಕೃತವಾಗಿ ಘೋಷಿಸಿತು. ಪ್ರಸಿದ್ಧ ವೈದ್ಯ ಮತ್ತು ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಡಾ. ಬಿಧನ್ ಚಂದ್ರ ರಾಯ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.



