ಮಂಗಳೂರು, ಜುಲೈ 1: ನಿರಂತರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ 2, 2026 (ಗುರುವಾರ) ರಜೆ ಘೋಷಿಸಲಾಗಿದೆ.
ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ಜಿಲ್ಲಾಡಳಿತವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರಲು ಮನವಿ ಮಾಡಿದೆ. ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶಗಳನ್ನು ಜಿಲ್ಲಾಡಳಿತ ಪ್ರಕಟಿಸಲಿದೆ.



