ಮಹನೀಯರ ಆದರ್ಶಗಳು ಒಂದು ಜಾತಿಗೆ ಸೀಮಿತವಲ್ಲ: ಡಿಸಿ ಕವಿತಾ ಎಸ್.ಮನ್ನಿಕೇರಿ

 

 

 

 

ನಾರಾಯಣ ಗುರು ಜಯಂತಿ: ಸರಳ ಆಚರಣೆ
**
ಚಿತ್ರದುರ್ಗ,ಆಗಸ್ಟ್23:
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕೋವಿಡ್-19ರ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಮಹನೀಯರ ಆದರ್ಶಗಳು ಒಂದು ಜಾತಿಗೆ ಸೀಮಿತವಲ್ಲ. ನಾರಾಯಣ ಗುರು ಅವರ ಆದರ್ಶ, ಮೌಲ್ಯಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಮಾತನಾಡಿ, ಕೇರಳದಲ್ಲಿ ಜನಿಸಿದಂತಹ ನಾರಾಯಣ ಗುರು ಅವರು ಆಗಿನ ಸಂದರ್ಭದಲ್ಲಿ ಸಮಾಜದಲ್ಲಿನ ಅಸಮಾನತೆ, ಜಾತಿ ಜಾತಿಗಳ ಮಧ್ಯ ಇದ್ದ ವೈಷಮ್ಯ ಮತ್ತು ಅಸ್ಪøಶ್ಯತೆ, ಧರ್ಮಗಳ ಬಗ್ಗೆ ಭಿನ್ನಬೇಧ, ತಾರತಮ್ಯ ನಡೆಯುತ್ತಿತ್ತು. ಅಂತಹ ಸಂದರ್ಭದಲ್ಲಿ ಅವರು ಸಮಾಜಕ್ಕೆ ತಮ್ಮದೇ ಆದ ತತ್ವ ಸಿದ್ಧಾಂತಗಳ ಮೂಲಕ ಅಸಮಾನತೆ ಹೋಗಲಾಡಿಸಲು ಸಾಕಷ್ಟು ಪ್ರಭಾವ ಬೀರಿದ್ದಾರೆ ಎಂದು ತಿಳಿಸಿದರು.
ಅಸ್ಪಶ್ಯತೆ, ಅಜ್ಞಾನ, ಅಂಧಶ್ರದ್ಧೆ ವಿರುದ್ಧ ಹೋರಾಟ ನಡೆಸಿ, ಸಮ ಸಮಾಜ ನಿರ್ಮಾಣಕ್ಕಾಗಿ ದಿಟ್ಟ ಹೆಜ್ಜೆ ಇಟ್ಟ ನಾರಾಯಣ ಗುರು ಅವರ ಚಿಂತನೆಗಳು, ತತ್ವಾದರ್ಶಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ. ಅವರ ತತ್ವಾದರ್ಶ, ಚಿಂತನೆ, ಸಿದ್ದಾಂತಗಳ ಮೂಲಕ ಸಮಾಜದ  ಸುಧಾರಣೆ ಮಾಡಲು ನಾವೆಲ್ಲರೂ ಹೆಚ್ಚಿನ ಪ್ರಯತ್ನ ಮಾಡೋಣ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಧನಂಜಯ, ನಾರಾಯಣ ಗುರು ಸಮಾಜದ ಅಧ್ಯಕ್ಷರಾದ ಜೀವನ್, ಕಾರ್ಯದರ್ಶಿ ಮಂಜುನಾಥ್, ನಗರಸಭೆ ಸದಸ್ಯರಾದ ಅನುರಾಧ ರವಿಕುಮಾರ್ ಹಾಗೂ ಸಮಾಜದ ಮುಖಂಡರಾದ ಚಂದ್ರು, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

 

 

[t4b-ticker]

You May Also Like

More From Author

+ There are no comments

Add yours