ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹೆಚ್ಡಿ ರೇವಣ್ಣ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಮೊನ್ನೆ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ಶೀಘ್ರ ಚೇತರಿಕೆಗಾಗಿ ಕುಟುಂಬಸ್ಥರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.




