ಕೇರಳದಲ್ಲಿ ಫುಟ್ಬಾಲ್ ಕ್ರೀಡೆಯು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ (FIFA World Cup 2026) ಮಹಾ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20ರ ಸೋಮವಾರದಂದು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ. ಆದರೆ ಮೊದಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ.