ಕೋವಿಡ್ ನಿಯಮ ಪಾಲನೆ ಮಾಡಿ ವಾಲ್ಮೀಕಿ ಜಯಂತಿ ಆಚರಣೆ: ಪೂರ್ವಸಿದ್ಧತೆ ಕೈಗೊಳ್ಳಲು ಸೂಚನೆ:ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ.

 

 

 

 

ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ

 

 

ಚಿತ್ರದುರ್ಗ,ಸೆಪ್ಟೆಂಬರ್24:
ಕೋವಿಡ್ ನಿಯಮಾವಳಿ ಪಾಲನೆ ಮಾಡಿ ಅಕ್ಟೋಬರ್ 20ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಮಾರ್ಗಸೂಚಿ ಅನ್ವಯ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಿಯಮ ಪಾಲನೆಯನ್ವಯ ಭೌತಿಕವಾಗಿ ಆಚರಿಸಲು ಅವಕಾಶವಿದೆ. ಹಾಗಾಗಿ ಕೋವಿಡ್-19ರ ನಿಯಮಾವಳಿ ಪಾಲನೆ ಮಾಡಿ ಜಯಂತಿಯನ್ನು ಯಶಸ್ವಿಯಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಜಯಂತಿ ಅಂಗವಾಗಿ ಕಲಾತಂಡಗಳ ಮೆರವಣಿಗೆ ಇರಲಿದ್ದು, ಮೆರವಣಿಗೆ ಸಂದರ್ಭದಲ್ಲಿಯೂ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು. ಎಲ್ಲಿಂದ ಮೆರವಣಿಗೆ ಪ್ರಾರಂಭಿಸಬೇಕು ಎಂಬುವುದರ ಕುರಿತು ಸ್ಥಳ ನಿಗಧಿ ಮಾಡಿ ನಂತರ ತಿಳಿಸಲಾಗುವುದು. ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಉಪನ್ಯಾಸ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರವೂ ನಡೆಯಲಿದೆ ಎಂದು ಹೇಳಿದರು.
ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕೋವಿಡ್-19ರ ಮಾರ್ಗಸೂಚಿಗಳಾದ ಮಾಸ್ಕ್, ದೈಹಿಕ ಅಂತರ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು. ನಗರಸಭೆಯವರು ಸ್ವಚ್ಛತೆವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ನಾಯಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ಕಾಂತರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು

[t4b-ticker]

You May Also Like

More From Author

+ There are no comments

Add yours