ನೀಟ್ ಪೇಪರ್ ಲೀಕ್ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಮಾನುಷ ದಾಳಿಯನ್ನು ನಡೆಸಿದ್ದಾರೆ ಎಂಬ ಆರೋಪದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಪ್ರತಿಕ್ರಿಯೆ ತುರ್ತು ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಘಟನೆಗೆ ಸಂಬಂಧಿಸಿದ ಸಿಸಿಟಿವಿ (CCTV) ಮತ್ತು ಇತರ ಎಲ್ಲಾ ವಿಡಿಯೋ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಡಲು ಕಟ್ಟುನಿಟ್ಟಿನ ಆದೇಶ ನೀಡಿದೆ. ಬುಧವಾರ ನಡೆದ ನ್ಯಾಯಾಲಯದ ವಿಚಾರಣೆಯು ಅರ್ಜಿದಾರರ ಪರ ವಕೀಲರು ಮತ್ತು ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್. ರಾಜು ಅವರ ನಡುವಿನ ತೀವ್ರ ವಾಗ್ದಾಳಿಗೆ ಸಾಕ್ಷಿಯಾಯಿತು.

ಅರ್ಜಿದಾರರ ಪರ ವಕೀಲರ ಗಂಭೀರ ಆರೋಪಗಳು
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಎನ್. ಹರಿಹರನ್, ವಿಕಾಸ್ ಸಿಂಗ್ ಮತ್ತು ಗೋಪಾಲ್ ಶಂಕರನಾರಾಯಣ್ ವಾದ ಮಂಡಿಸಿದರು. ಅವರು ನ್ಯಾಯಾಲಯದ ಮುಂದೆ ಪ್ರತಿಭಟನೆ ಹತ್ತಿಕ್ಕುವ ವೇಳೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಖಾಸಗಿ ಅಂಗಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಮತ್ತು ಅವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪೊಲೀಸರು ಮೊಳೆಗಳನ್ನು ಜಡಿಯಲಾಗಿದ್ದ ಅಪಾಯಕಾರಿ ಲಾಠಿಗಳನ್ನು ಬಳಸಿದ್ದಾರೆ ಎಂದರು.



