ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಇಲ್ಲ. ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಕ್ರಿಮಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಪ್ರಕರಣದ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಇಲ್ಲ. ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಕ್ರಿಮಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಮೂಲದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಬಾಕ್ಸ್ನಲ್ಲಿ ತಂದಿದ್ದ ಮೊಟ್ಟೆಗಳನ್ನು ಎಸೆದಿದ್ದ ಆರೋಪಿ ಪುಣ್ಯೇಶ್ನನ್ನು ಶಿವಾಜಿನಗರ ಪೊಲೀಸರು ತಡರಾತ್ರಿ ಬಂಧಿಸಿ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಯ ಬೆನ್ನಲ್ಲೇ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿ ಮತ್ತೆ ಸದ್ದು ಮಾಡುತ್ತಿದೆ. ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ್ ಹಾಗೂ ಎಸ್ಟಿ ಸಮುದಾಯದ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ನೀಡುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಪ್ರಸ್ತಾಪವಾಗಿದೆ. ಸಂಸತ್ತಿನ ಉಭಯ ಸದನಗಳಲ್ಲಿ ವಿಪಕ್ಷಗಳು ನಡೆಸುತ್ತಿರುವ ಸತತ ಗದ್ದಲ ಹಾಗೂ ಪ್ರತಿಭಟನೆಯನ್ನು ಖಂಡಿಸಿ ಇಂದು ಬೆಳಿಗ್ಗೆ ೧೦:೩೦ಕ್ಕೆ ಸಂಸತ್ನ ಮಕರ ದ್ವಾರದ ಬಳಿ ಎನ್ಡಿಎ ಸಂಸದರು ಪ್ರತಿಭಟನೆ ನಡೆಸಲಿದ್ದಾರೆ.



