ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಮತ್ತು ಪ್ರತಿಭಟನಾನಿರತ ಸಂಘಟನೆಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.




