ಮಂಡ್ಯ, ಜು. 26: ಇತ್ತೀಚೆಗಷ್ಟೇ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಈ ರೀತಿ ಹೇಳಿಕೆ ನೀಡಿದ್ದಾರೆ. ಆದರೆ ಅದೇ ವೇಳೆ ನೀವಿನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ಘಟನೆಯೂ ನಡೆದಿದೆ.
ಒಟ್ಟು ಎರಡು ಅವಧಿಗಳಲ್ಲಿ ಮುಖ್ಯಮಂತ್ರಿಯಾಗಿ 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿರುವ ಇವರು, ಈ ಹಿಂದೆಯೂ ಇಂತಹುದ್ದೇ ಹೇಳಿಕೆಯನ್ನು ಹಲವು ಬಾರಿ ನೀಡಿದ್ದರು ಎನ್ನುವುದೂ ಇಲ್ಲಿ ಗಮನಾರ್ಹ ವಿಷಯ.



