ಮೂಡುಬಿದಿರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ 600ಕ್ಕೆ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮೂಲ್ಕಿ ವತಿಯಿಂದ ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಅವರ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರ ನೇತೃತ್ವದಲ್ಲಿ ದಿಶಾ ಪೂಜಾರಿಗೆ ನಗದು ಪುರಸ್ಕಾರ ಹಾಗೂ ಸನ್ಮಾನ ನೀಡಿ ಅಭಿನಂದಿಸಲಾಯಿತು.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಎಂ., ಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘ ಮೂಡುಬಿದಿರೆಯ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷ ಕುಮಾರ್ ಪೂಜಾರಿ, ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು, ಶ್ರೀ ಗುರುದೇವ ಸಹಕಾರ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ಬಿಲ್ಲವರ ಮಹಾಮಂಡಲದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಜಯಾರಾಮ್ ಕಾರಂದೂರು, ಪ್ರತಾಪ್ ಕುಮಾರ್ ಉದ್ಯಾವರ, ಸುಶಾಂತ್ ಕರ್ಕೇರಾ, ಭಾಸ್ಕರ ಅಮೀನ್, ಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘ ಮೂಡುಬಿದಿರೆಯ ಉಪಾಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಹಾಗೂ ಸುಭಾಷ್ ಕೈಪುಂಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಜೊತೆ ಕಾರ್ಯದರ್ಶಿ ಭವಿಷ್ಯತ್ ಕೋಟ್ಯಾನ್ ಉಪಸ್ಥಿತರಿದ್ದರು.



