ಬೆಳ್ತಂಗಡಿ: ಜು. 28: ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ಹಾಗೂ ಬಂಟ್ವಾಳ ಸೇರಿದಂತೆ ಹಲವು ನಾಡ ಕಚೇರಿಗಳಲ್ಲಿ ಕಳೆದ ಹತ್ತು ದಿನಗಳಿಂದ ನೆಟ್ವರ್ಕ್ ಮತ್ತು ಸರ್ವರ್ ಸಮಸ್ಯೆ ಮುಂದುವರಿದಿದೆ.

ಇದರಿಂದ ಜಾತಿ, ಆದಾಯ, ನಿವಾಸ ಸೇರಿದಂತೆ ವಿವಿಧ ಪ್ರಮಾಣಪತ್ರಗಳ ವಿತರಣೆ ವಿಳಂಬವಾಗಿದ್ದು, ಸಾರ್ವಜನಿಕರು ಗಂಟೆಗಟ್ಟಲೆ ಕಾದರೂ ಕೆಲಸವಾಗದೆ ಹಿಂದಿರುಗುತ್ತಿದ್ದಾರೆ. ವಿದ್ಯಾರ್ಥಿವೇತನ, ಸರ್ಕಾರಿ ಯೋಜನೆಗಳು ಹಾಗೂ ಬ್ಯಾಂಕ್ ಸಾಲಕ್ಕೆ ಅಗತ್ಯ ದಾಖಲೆಗಳು ಸಿಗದ ಕಾರಣ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.ದಿನಗೂಲಿ ಕಾರ್ಮಿಕರು, ರೈತರು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಪದೇಪದೇ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಸಾರ್ವಜನಿಕರಿಗೆ ನಿರಂತರ ಸೇವೆ ಒದಗಿಸುವಂತೆ ಜನರು ಸರ್ಕಾರವನ್ನು ಆಗ್ರಹಿಸಿದ್ದಾರೆ.



