ವೇಣೂರು: ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೊಲೀಸ್ ಆರಕ್ಷಕ ಠಾಣೆ ವೇಣೂರು, ರೋಟರಿ ಕ್ಲಬ್ ಫಲ್ಗುಣಿ ಸಿದ್ದ ಕಟ್ಟೆ, ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.

ವೇಣೂರು ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಓಮನ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ದಿಂದ ಆಗುವ ಅನಾಹುತಗಳ ಬಗ್ಗೆ ಇರಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲ ವೆಂಕಟೇಶ S. ತುಳುಪುಳೆ ವಹಿಸಿದ್ದರು.
ಎನ್. ಎಸ್. ಎಸ್ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಹೆರಾಲ್ಡ್ ನೆಲ್ಸನ್ ಕ್ಯಾಸ್ಟಲಿನೊ ಧನ್ಯವಾದವಿತ್ತರು. ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



