ವೇಣೂರು: ಸರಕಾರಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳನ್ನು ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಇಲ್ಲಿಯ ಪೊಲೀಸ್ ಠಾಣೆಗೆ ಬರಮಾಡಿಕೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಠಾಣಾ ಕಾರ್ಯವೈಖರಿ, ಪೊಕ್ಸೊ ಕಾಯ್ದೆ, ಸೈಬರ್ ಕ್ರೈಂ, ಮಾದಕ ವ್ಯಸನ & ಅದರ ದುಷ್ಪರಿಣಾಮಗಳು, 1098, 1930, 112 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಲಾಯಿತು.


ಪೊಲೀಸ್ ಉಪ ನಿರೀಕ್ಷಕಿ ಓಮನಾ, ಶಾಲಾ ಶಿಕ್ಷಕವೃಂದ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.



