ಅರಂಬೋಡಿ: ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.7ರಂದು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರಗಿತು.



ಮಾರ್ಗದರ್ಶಿ ಅಧಿಕಾರಿಗಳಾಗಿ ಪಶು ವೈದ್ಯಕೀಯ ಇಲಾಖೆಯ ವೈದ್ಯಾಧಿಕಾರಿ ಡಾ. ರವಿಕುಮಾರ್ ಭಾಗವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಕೃಷಿ, ಆರೋಗ್ಯ, ಶಿಕ್ಷಣ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ, ಪೊಲೀಸ್, ಮೆಸ್ಕಾಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಭಾಗದಲ್ಲಿ 90% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು/ಪೋಷಕರನ್ನು ಅಭಿನಂದಿಸಲಾಯಿತು..
ಗ್ರಾಮ ಪಂಚಾಯತ್ ನಲ್ಲಿ 20 ವರ್ಷಗಳ ಕಾಲ ಪಂಪು ನಿರ್ವಾಹಕ ರಾಗಿ ಸೇವೆ ನೀಡಿ ನಿವೃತ್ತರಾದ ಸದಾಶಿವ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಪಂಚಾಯತ್ ಅಧಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ ವರದಿ ಮಂಡಿಸಿದರು. ಸದಸ್ಯರಾದ ದೀಕ್ಷಿತ ವಂದಿಸಿದರು.



