ವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಆಶ್ರಯದಲ್ಲಿ ದೇವಸ್ಥಾನದ ವಠಾರದಲ್ಲಿ ಸೆ. 6ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.


ಹಿರಿಯರಾದ ಲಕ್ಷ್ಮೀನಾರಾಯಣ ಆಚಾರ್ಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಎ. ಜಯರಾಮ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರು, ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಭಟ್, ಅಧ್ಯಕ್ಷರಾದ ದಯಾನಂದ ದೇವಾಡಿಗ, ಕಾರ್ಯದರ್ಶಿ ಸಂತೋಷ್ ಪೂಜಾರಿ, ಕೋಶಾಧಿಕಾರಿ ಪ್ರಮೋದ್ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.



