ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶವಾದ ಕುದುರೆಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಾರಾಂತ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಆಫ್-ರೋಡ್ ಅಡ್ವೆಂಚರ್ ಡ್ರೈವ್’ಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಾಹಸಯಾತ್ರೆಯಿಂದ ಜಲಮೂಲಗಳು ಕಲುಷಿತಗೊಂಡರೆ ಅಥವಾ ಗ್ರಾಮೀಣ ರಸ್ತೆಗಳು ಹಾಳಾದರೆ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.





