ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾ.ಪಂ. ವ್ಯಾಪ್ತಿಯ ಕಾಮೆಟ್ಟು ಬಳಿ ಇದೀಗ ಭೀಕರ ರಸ್ತೆ ಅಪಘಾತ ನಡೆದಿದೆ.
ಬಜಿರೆಯ ಮುದ್ದಾಡಿ ಕಡೆಯಿಂದ ಬರುತ್ತಿದ್ದ ಪಿಕಪ್ ಗೂಡ್ಸ್ ಕಾಮೆಟ್ಟು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ವಾಹನ ಸವಾರರು ಚಾಲಕನನ್ನು ಉಪಚರಿಸಿ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





