ರೈತರ ಹಾಗೂ ಗ್ರಾಮೀಣ ಜನರ ಆರ್ಥಿಕ ಸದೃಢತೆಯಿಂದ ದೇಶ ಬಲಿಷ್ಠ: ಸುಂದರ ಹೆಗ್ಡೆ ಬಿ.ಇ.


ವೇಣೂರು, ಆ. 15: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ವೇಣೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ BE ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನೂ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಸಹಕಾರಿ ಕ್ಷೇತ್ರವು ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಂಘದ ಸದಸ್ಯರು ಮತ್ತು ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು ರತ್ನಾಕರ ಬರ್ಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ನಿರ್ದೇಶಕರು, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್ ಮಹಮ್ಮದ, ಮೂಡುಕೋಡಿ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಶಾಂತ್ ಗೌಡ ಹಾಗೂ ಸಿಬ್ಬಂದಿಗಳು ಸದಸ್ಯರು, ಗ್ರಾಹಕರು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿ ಲೆಕ್ಕಿಗ ಭರತ್ ರಾಜ್ ವಂದಿಸಿದರು.



