ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ನವೆಂಬರ್19:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಮತೀಯ ಅಲ್ಪಸಂಖ್ಯಾತ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ 2021-22ನೇ ಸಾಲಿನಲ್ಲಿ ಸಾಲಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿದಾರರು ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‍ಪೇಜ್ ವಿವರ ಇಂತಿವೆ. www.kmdconline.karnataka.gov.in ಇದರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
2020-21ನೇ ಸಾಲಿನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆಯಲಾಗದಿರುವ ಅರ್ಜಿದಾರರು 2021-22ನೇ ಸಾಲಿನಲ್ಲಿ ಪುನಃ ಅರ್ಜಿ ಸಲ್ಲಿಸಬೇಕು.
ಯೋಜನೆಗಳ ವಿವರ: ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ (ಪರಿಷ್ಕøತ), ಸಣ್ಣ (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ವೈಯಕ್ತಿಕ (ಸಣ್ಣ) (ಕೋವಿಡ್-19) ಸಾಲ ಯೋಜನೆ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ ಈ ಯೋಜನೆಗಳಡಿ ಸಾಲಸೌಲಭ್ಯ ಪಡೆಯಬಹುದಾಗಿದೆ.
ಸಾಲಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು ಮತ್ತು ಮಾನದಂಡಗಳು: ಅರ್ಜಿದಾರರು ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಮೈಕ್ರೋ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ನಗರ ಪ್ರದೇಶದಲ್ಲಿ ರೂ.1,03,000/-ನ್ನು ಮತ್ತು ಗ್ರಾಮೀಣ ಪ್ರದೇಶದಲ್ಲಿ 96,000/-ನ್ನು ಮೀರಿರಬಾರದು. ಮತ್ತು ಟ್ಯಾಕ್ಸಿ, ಗೂಡ್ಸ್ ಯೋಜನೆ ಹಾಗೂ ಶ್ರಮಶಕ್ತಿ ಸಾಲಯೋಜನೆಯಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.4,50,000/-ನ್ನು ಮೀರಿರಬಾರದು ಮತ್ತು ಮೈಕ್ರೋ ವೈಯಕ್ತಿಕ ಕೋವಿಡ್-19 ಸಾಲ ಯೋಜನೆಗೆ ಬಿಪಿಎಲ್ ಕಾರ್ಡ್ ಹೊಂದಿರಬೇಕು.
ಟ್ಯಾಕ್ಸಿ, ಗೂಡ್ಸ್ ಯೋಜನೆ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಶ್ರಮಶಕ್ತಿ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಮೈಕ್ರೋ ಕೋವಿಡ್-19ಸಾಲ ಯೋಜನೆಗೆ ಅರ್ಜಿದಾರರ ವಯಸ್ಸು 25 ರಿಂದ 50 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಗಳಡಿಯಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸಾಲಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಐಎಫ್‍ಎಸ್‍ಸಿ ಕೋಡ್ ಹೊಂದಿರುವ ಬ್ಯಾಂಕುಗಳಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು.
ಆನ್‍ಲೈನ್ ಅರ್ಜಿಗಳನ್ನು ಡಿಸೆಂಬರ್ 15ರೊಳಗೆ ಯಾವುದಾದರೂ ಸೈಬರ್ ಸೆಂಟರ್‍ನಲ್ಲಿ ಅರ್ಜಿದಾರರ ವಿವರವನ್ನು ಭರ್ತಿ ಮಾಡಿ ಪ್ರಿಂಟ್ ತೆಗೆದು ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226412 ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಚಿತ್ರದುರ್ಗ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours