ಬೆಂಗಳೂರು, ಆ. 20: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಸಂಬಂಧ ಬಗೆದಷ್ಟೂ ಶಾಕಿಂಗ್ ವಿಚಾರಗಳು ಬಯಲಾಗ್ತಿವೆ. ಪ್ರತಿಷ್ಠಿತ MNC ಬ್ರ್ಯಾಂಡ್ಗಳ ಹೆಸರಿನಲ್ಲಿ ಜೀವಕ್ಕೇ ಕಂಟಕ ತರುವ ನಕಲಿ ಇಂಜೆಕ್ಷನ್ ಹಾಗೂ ಮಾತ್ರೆಗಳನ್ನು ಪೂರೈಸುತ್ತಿದ್ದ ಈ ಅಂತಾರಾಜ್ಯ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನ ಬಂಧಿಸಲಾಗಿದ್ದು, ಇದರ ಕಿಂಗ್ ಪಿನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣವನ್ನು ಇದೀಗ ಎಸ್ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಆದೇಶಿಸಲಾಗಿದೆ.





