ವೇಣೂರು, ಆ. 21: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯಿದೆ ಅಡಿ ವೇಣೂರು ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.


ಆರೋಪಿ ವೇಣೂರು ನಿವಾಸಿ ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಪ್ರಾಯದ ಸಂತ್ರಸ್ಥ ಬಾಲಕಿಯು (14) ಕೆಲವು ತಿಂಗಳುಗಳಿಂದ ಆರೋಪಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಬೆಳ್ತಂಗಡಿ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದು, ಈ ವೇಳೆ ಆರೋಪಿಯು ಅನುಚಿತವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಬಾಲಕಿಯು ಪ್ರತಿರೋಧಿಸಿದಾಗ ಆರೋಪಿಯು ಜೀವಬೆದರಿಕೆ ಒಡ್ಡಿದ್ದಾನೆ. ಇದರಿಂದಾಗಿ ಹೆದರಿದ್ದ ಬಾಲಕಿ ಆತನ ವರ್ತನೆಯ ಬಗ್ಗೆ ಯಾರಿಗೂ ತಿಳಿಸಿಲ್ಲ. ಅಗಸ್ಟ್ 13ರಂದು ಸಂಜೆ ಬಾಲಕಿಯು ಆಕೆಯ ಮನೆಯಲ್ಲಿ ಒಬ್ಬಳೇ ಇದ್ದಾಗ, ಮನೆಗೆ ಬಂದ ಆರೋಪಿಯು ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ದೂರಿನ ಪ್ರಕಾರ, ವೇಣೂರು ಪೊಲೀಸ್ ಠಾಣಾ ಅ.ಕ್ರ: 56/2026 ಕಲಂ: 75(2), 64(1), 65(1), 351(3) BNS 2023 ಮತ್ತು ಕಲಂ: 4(2), 8, 12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



