ಮಂಗಳೂರು: ನಾಳೆಯಿಂದಲೇ ದ.ಕ. ಜಿಲ್ಲೆಯಲ್ಲಿ ಶನಿವಾರ ಶನಿವಾರ ಪೂರ್ಣ ತರಗತಿಗಳು ನಡೆಯಲಿದೆ. ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಶಿಕ್ಷಣ ಈ ಕ್ರಮಕ್ಕೆ ಮುಂದಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆಗಳನ್ನು ಘೋಷಿಸಿರುತ್ತಾರೆ. ಈವರೆಗೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕುಗಳಿಗೆ ಒಟ್ಟು ಎಂಟು ಪೂರ್ಣ ದಿನಗಳು ಮತ್ತು ಒಂದು ಅರ್ಧ ದಿನದ ರಜೆಯನ್ನು ಘೋಷಿಸಲಾಗಿರುತ್ತದೆ. ಮತ್ತು ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ವಲಯಗಳಿಗೆ ಒಟ್ಟು ಒಂಭತ್ತು ಪೂರ್ಣ ದಿನಗಳ ರಜೆಗಳನ್ನು ಘೋಷಿಸಲಾಗಿರುತ್ತದೆ. ಈ ರಜಾ ದಿನಗಳಲ್ಲಿ ಕೊರತೆಯಾಗಿರುವ ಬೋಧನಾ ಅವಧಿಗಳನ್ನು ಸರಿದೂಗಿಸಲು ಅಗಸ್ಟ್ ತಿಂಗಳ ಮೂರನೇ ವಾರದಿಂದ ಆರಂಭವಾಗಿ ಶನಿವಾರ ಅಪರಾಹ್ನ ಪೂರ್ಣ ತರಗತಿಗಳನ್ನು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಇತರೆ ದಿನಗಳಲ್ಲಿ ಹೆಚ್ಚುವರಿಯಾಗಿ ಸಂಜೆ ಅವಧಿಯಲ್ಲಿ ಒಂದು ಬೋಧನಾ ಅವಧಿ ನಡೆಸಲು ಸೂಚಿಸಿದೆ.



