ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು.
ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಪಿ. ಶೆಟ್ಟಿ ಅವರ ಪೋಷಕರೂ ಹಾಗೂ ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಪ್ರಮೋದ್ ಶೆಟ್ಟಿ ಅವರು ಬ್ಯಾಡ್ಜ್ಗಳನ್ನು ವಿತರಿಸಿದರು.
ಶಾಲೆಯ ಕಾರ್ಯಕ್ರಮಕ್ಕೆ ಸಹಕಾರ ನೀಡಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ದೇಶಭಕ್ತಿಯ ಮನೋಭಾವ ಮೂಡಿಸಲು ಪ್ರೋತ್ಸಾಹಿಸಿದ ಪ್ರಮೋದ್ ಶೆಟ್ಟಿ ಅವರಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು.





