ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಗುಂಡೂರಿ, ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಗುಂಡೂರಿ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗುಂಡೂರಿ, ಶ್ರೀ ಸತ್ಯನಾರಾಯಣ ಶೌರ್ಯ ವಿಪತ್ತು ಘಟಕ ಗುಂಡೂರಿ ಇದರ ಆಶ್ರಯದಲ್ಲಿ ಜರಗಲಿರುವ 23ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಆ. 28ರಂದು ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ಸಭಾಂಗಣದಲ್ಲಿ ಬೆಳಿಗ್ಗೆ 8-30ರಿಂದ ನಡೆಯಲಿದೆ.


ಬೆಳಿಗ್ಗೆ 11-00 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ನ್ಯಾಯವಾದಿ ಶ್ರೀಮತಿ ಸಹನಾ ಕುಂದರ್ ಸೂಡಾ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಗೀತಾ ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಆಯೋಜಕರ ಜಂಟಿ ಪ್ರಕಟಣೆ ತಿಳಿಸಿದೆ.



