ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಲು ಉದ್ದೇಶಿಸಿದ್ದ ಸೆಪ್ಟೆಂಬರ್ 5ರ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದ ತಕ್ಷಣ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಚಳವಳಿಯಲ್ಲಿ ಭಾಗವಹಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಎಫ್ಐಆರ್ಗಳನ್ನು ದೇಶಾದ್ಯಂತ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಸಂವಿಧಾನದ ವಿಧಿ 142ರ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿ, ದೆಹಲಿ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ.





