ಶಿವಮೊಗ್ಗ: ಪೋಷಕರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.


ಸೃಷ್ಟಿ (14) ಮೃತಪಟ್ಟ ವಿದ್ಯಾರ್ಥಿನಿ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಚೆನ್ನಾಗಿ ಓದುವಂತೆ ಪದೇಪದೇ ಬುದ್ಧಿವಾದ ಹೇಳುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಸೃಷ್ಟಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆ ನಡೆದ ವೇಳೆ ಸೃಷ್ಟಿಯನ್ನು ಮನೆಯಲ್ಲೇ ಬಿಟ್ಟು ತಂದೆ-ತಾಯಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ಮನೆಗೆ ವಾಪಸಾದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



