ವೇಣೂರು: ವೇಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀನಿಧಿ ಎಂಟರ್ ಪ್ರೈಸಸ್ನ ಮಾಲಕರು ಪಿ. ಜಗದೀಶ್ ಭಟ್ ಶ್ರೀನಿಧಿ ಹಾಗೂ ಕಾರ್ಯದರ್ಶಿಯಾಗಿ ಎ. ಪ್ರಶಾಂತ್ ಹೆಬ್ಬಾರ್ ಆಯ್ಕೆಯಾಗಿದ್ದಾರೆ.


ಫಲ್ಗುಣಿ ಸೇವಾ ಸಂಘ (ರಿ.) ವೇಣೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 26ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ಮತ್ತು 15 ರಂದು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸಮಿತಿಯ ಕೋಶಾಧಿಕಾರಿಗಳಾಗಿ ಜಗದೀಶ್ಚಂದ್ರ ಡಿ.ಕೆ. ಹಾಗೂ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಕೆ. ಭಾಸ್ಕರ ಪೈ, ಸುದತ್ ಜೈನ್, ಪ್ರವೀಣ್ ಭಂಡಾರಿ, ನೇಮಯ್ಯ ಕುಲಾಲ್, ನವೀನ್ ಪಚ್ಚೇರಿ, ಸುಧೀರ್ ಭಂಡಾರಿ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ ಸಮಿತಿಗೆ 50 ಮಂದಿ ಸದಸ್ಯರನ್ನು ನೇಮಿಸಲಾಯಿತು. ಫಲ್ಗುಣಿ ಸೇವಾ ಸಂಘ (ರಿ.) ವೇಣೂರು ಇದರ ಸ್ಥಾಪಕಾಧ್ಯಕ್ಷರಾದ ವಿ.ಎಸ್. ಜಯರಾಜ್ ಅವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.



