ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಮಿತಿ ಆಶ್ರಯದಲ್ಲಿ ಏಕಾದಶ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ವಿವಿಧ ಆಟೋಟ ಸ್ಪರ್ಧೆಯು ಸೆ. 6ರಂದು ವೇಣೂರು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬಾಲಕ-ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. 5 ವರ್ಷದ ಒಳಗಿನ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ವಿಶೇಷವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ನಡೆಯಲಿದೆ.





