ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೈದಿಕ ಆಚರಣೆ ಹಾಗೂ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಸೆ. 4ರಂದು ಮಧ್ಯಾಹ್ನ 1-30ರಿಂದ ನಡೆಯಲಿದೆ.
ಮಧ್ಯಾಹ್ನ ಭಜನಾ ಸಂಕೀರ್ತನೆ, ಸಾಮೂಹಿಕ ಪ್ರಾರ್ಥನೆ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಮಧ್ಯಾಹ್ನ ೩-೫ಕ್ಕೆ ಮುದ್ದುಕೃಷ್ಣ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ ನಡೆಯಲಿದೆ. ಸಂಜೆ 7-00 ಗಂಟೆಗೆ ನಡೆಯುವ ಧಾರ್ಮಿಕಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಂದರ ಕುಲಾಲ್ ಅವರು ವಹಿಸಲಿದ್ದು, ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬಹುಮಾನ ವಿತರಣೆ ನಡೆಯಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.





