ಬೆಂಗಳೂರು/ಬೆಳ್ತಂಗಡಿ: ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ತಂಗಡಿ ಮೂಲದ ಶ್ರೀಮತಿ ಉಷಾರಾಣಿ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಹೈ ಕೋರ್ಟ್ ನ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.


ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹಾಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಉಷಾರಾಣಿ, ಕೆ.ಎಸ್. ಭರತ್ ಕುಮಾರ್ ಮತ್ತು ನೆರಳೆ ವೀರಭದ್ರಯ್ಯ ಭವಾನಿ ಅವರ ಹೆಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ನೀಡಲು ಶಿಫಾರಸು ಮಾಡಲಾಗಿತ್ತು. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಉಷಾ ರಾಣಿ ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿಯಲ್ಲಿ ಹಿರಿಯ ವಕೀಲರು ಹಾಗೂ ಸಮಾಜಸೇವಾಕರ್ತರಾಗಿ ಚಿರಪರಿಚಿತರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿಯಾಗಿದ್ದಾರೆ.



