ಚಿತ್ರದುರ್ಗ, ಡಿಸೆಂಬರ್06:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚಿತ್ರದುರ್ಗ ನಗರದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶ್ರೇಷ್ಟ ಮಾನವತಾವಾದಿ, ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ್ ಶಿನ್ನೋಳಕರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ತಹಶೀಲ್ದಾರ್ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
[t4b-ticker]
+ There are no comments
Add yours