ವೇಣೂರು: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರೂ, ತಳಮಟ್ಟದ ಪಕ್ಷದ ಕಾರ್ಯಕರ್ತರಿಗೆ ಗೌರವ ನೀಡುತ್ತಿರುವ ಅತ್ಯಂತ ನಿಷ್ಠಾವಂತ ಯುವ ಮುಖಂಡ ಶೇಖರ್ ಕುಕ್ಕೇಡಿ ರವರ ರಾಜೀನಾಮೆ ಬೇಸರ ತಂದಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ಇವರ ಬೇಡಿಕೆಯನ್ನು ತಕ್ಷಣ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಖಾಲಿದ್ ಪುಲಾಬೆ ಮನವಿ ಮಾಡಿದ್ದಾರೆ.


ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ದುಡಿದು, ಪಕ್ಷದ ದ.ಕ. ಜಿಲ್ಲಾ ಕಾಂಗ್ರೇಸ್ನ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ಮಾಜಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಳದಂಗಡಿ ಕ್ಷೇತ್ರದ ಮಾಜಿ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಮತ್ತು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರು ಕಾಂಗ್ರೆಸ್ ಪಕ್ಷಕ್ಕೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬರುತ್ತಿದ್ದು, ನಾಯಕರು ಇವರ ಬೇಡಿಕೆಯನ್ನು ತಕ್ಷಣ ಪರಿಶೀಲಿಸಿ ಕ್ರಮವಹಿಸಲು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಇದರ ಉಪಾಧ್ಯಕ್ಷ ಖಾಲಿದ್ ಪುಲಾಬೆ ಮನವಿ ಮಾಡಿದ್ದಾರೆ.



