ಮಂಗಳೂರು, ಸೆ. 21: 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್ ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ ಕೋರ್ಟ್ ಆದೇಶಿಸಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಆ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.





