ಮಂಗಳೂರು: ಸೆ.21: ಮೂಡುಬಿದ್ರೆ-ಕಾರ್ಕಳ ಹೆದ್ದಾರಿಯ ಸಾಣೂರು ಜಂಕ್ಷನ್ ನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ರಮಾನಾಥ ರೈ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡಿದ್ದಾರೆ.


ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಮಾನಾಥ ರೈ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಅಲ್ಲದೆ ಗಾಯಗೊಂಡ ಇತರರನ್ನು ಕೂಡ ಸಂಸದರು ಭೇಟಿ ಮಾಡಿದರು.



