ವೇಣೂರು: ಮಂಗಳೂರು ಜಿ.ಪಂ. ಮಾಜಿ ಸದಸ್ಯರು, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಶೇಖರ ಕುಕ್ಕೇಡಿಯವರ ಬೇಡಿಕೆಯನ್ನು ರಕ್ಷಿತ್ ಶಿವರಾಂ ಮುಖಾಂತರ ರಾಜ್ಯ ವರಿಷ್ಠರ ಗಮನಕ್ಕೆ ತಂದಿದ್ದೇವೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಶೇಖರ ಕುಕ್ಕೇಡಿಯವರು ಒಬ್ಬ ನಿಷ್ಠಾವಂತ ರಾಜಕಾರಣಿ. ಸದಾ ಸಮಾಜಮುಖಿ ಚಿಂತನೆ ಹೊಂದಿರುವ ಅವರ ಬೇಡಿಕೆಯನ್ನು ಸರಕಾರ ಈಡೇರಿಸಬೇಕಾಗಿದ್ದು ಕರ್ತವ್ಯ. ಈಗಾಗಲೇ ರಕ್ಷಿತ್ ಶಿವರಾಂ ಅವರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ವರಿಷ್ಠರ ಗಮನಕ್ಕೆ ತಂದಿದ್ದಾರೆ. ಶೇಖರ ಕುಕ್ಕೇಡಿಯವರಿಗೆ ಶೀಘ್ರವಾಗಿ ನ್ಯಾಯ ಸಿಗುವ ಭರವಸೆ ಇದೆ ಎಂದಿದ್ದಾರೆ.





