ಮಂಗಳೂರು, ಸೆ.30: ಎಂಆರ್ಪಿಎಲ್ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ – ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ .


ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನಿಶ್ ಕರ್ಕರ ಎಂದು ಗುರುತಿಸಲಾಗಿದೆ. ಮನಿಶ್ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸ್ಥಳಕ್ಕೆ ಸಂಸದ ಕ್ಯಾಬ್ರಿಜೇಶ್ ಚೌಟ ಮತ್ತು ಪ್ರಮುಖ ಅಧಿಕಾರಿಗಳು ಭೇಟಿ ನೀಡಿದ್ದು ಘಟನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ



