ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ನಡೆಸಿದ ಬಿ.ಇ. (ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ – ಐಒಟಿ ಮತ್ತು ಸೈಬರ್ ಸೆಕ್ಯುರಿಟಿ) ಪರೀಕ್ಷೆಯಲ್ಲಿ ಕಾರ್ಕಳ ತಾಲೂಕು ಮುಂಡ್ಕೂರಿನ ಅಮೂಲ್ಯಾ ರಾವ್ ಅವರು ರಾಜ್ಯಕ್ಕೆ 3ನೇ ಬ್ಯಾಂಕ್ ಗಳಿಸಿದ್ದಾರೆ.


ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 26ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಹಾಗೂ ವಿಟಿಯು ಕುಲಪತಿ ಡಾ. ಎಸ್. ವಿದ್ಯಾಶಂಕರ್ ಅವರ ಉಪಸ್ಥಿತಿಯಲ್ಲಿ ಅಮೂಲ್ಯಾ ರಾವ್ ಅವರನ್ನು ಗೌರವಿಸಲಾಯಿತು.
ಮೂಡುಬಿದಿರೆಯ ಮೈಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅಮೂಲ್ಯಾ ರಾವ್ ಅವರು ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.
ಅವರು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಹಾಗೂ ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರಮ್ಯಾ ಅರುಣ್ ಕುಮಾರ್ ದಂಪತಿಯ ಪುತ್ರಿ.
ಅಮೂಲ್ಯಾ ರಾವ್ ಅವರ ಶೈಕ್ಷಣಿಕ ಸಾಧನೆಗೆ ಕುಟುಂಬಸ್ಥರು, ಉಪನ್ಯಾಸಕ ವೃಂದ, ಹಿತೈಷಿಗಳು ಹಾಗೂ ಊರಿನ ಗಣ್ಯರು ಹರ್ಷ ವ್ಯಕ್ತಪಡಿಸಿದ್ದು, ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.



