ಚಿತ್ರದುರ್ಗ, ಆ.09:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಮತ್ತೆ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1120 ಕ್ಕೆ ಏರಿಕೆಯಾಗಿದ್ದು, ಕೊರೊನಾ ವಾರಿಯರ್ಸ್ ವೈದ್ಯ ಸೇರಿದಂತೆ ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 06 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 18 ಹೊಳಲ್ಕೆರೆ-01, ಹಿರಿಯೂರು-26, ಚಳ್ಳಕೆರೆ-34, ಹೊಸದುರ್ಗ-10 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 08 ಸೇರಿದಂತೆ ಒಟ್ಟು 97 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಭಾನುವಾರ ಒಟ್ಟು 1037 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 97 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1120 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 18 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 533 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 569 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 302 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 7108 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
+ There are no comments
Add yours