ಮಂಗಳೂರು, ಅ. 12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪೊಲೀಸರ ಜೀಪನ್ನೇ ತಳ್ಳಿ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂದೂರ್ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ಸೇರಿರುವ ವಿದ್ಯಾರ್ಥಿಗಳು, ಪರೀಕ್ಷೆಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಹ ಬೆಂಬಲ ಸೂಚಿಸಿದ್ದಾರೆ.




