ಹಾಸನದಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ರೈಲು- ರಸ್ತೆ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ ರಚನೆ ಮಾಡಿದೆ. ಈ ಯೋಜನೆಯ ಕಾರ್ಯಸಾಧ್ಯತೆಯನ್ನು ಸಮಿತಿ ಪರಿಶೀಲಿಸಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಜಂಟಿ ಕಾರ್ಯನಿರತ ತಂಡ ರಚನೆ ಮಾಡಲಾಗಿದೆ ಎಂದು ಬಿಜೆಪಿ ಸಂಸದ ಬ್ರಿಜೇಶ್ ಚೌಟ ಅವರಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಂದ ಮಾಹಿತಿ ಬಂದಿದೆ.
ಮಂಗಳೂರು- ಬೆಂಗಳೂರು ಹೈಸ್ಪೀಡ್ ಕಾರಿಡಾರ್ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ.
ರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆಗೆ ಸಮಿತಿ ರಚಿಸಲು ಕೋರಿ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.





