ನವದೆಹಲಿ, ಅ.15: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಬಡ, ಅಸಹಾಯಕ ನಾಗರಿಕರ ಸಾಮಾಜಿಕ ಭದ್ರತೆಗಾಗಿ ಜಾರಿಯಲ್ಲಿರುವ ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದ (NSAP) ಅಡಿಯಲ್ಲಿನ ಪ್ರಮುಖ ಪಿಂಚಣಿ ಯೋಜನೆಗಳಿಗೆ ಮರುನಾಮಕರಣ ಮಾಡಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಹೆಸರಿನಲ್ಲಿದ್ದ ಮೂರು ಪ್ರಮುಖ ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರನ್ನು ಕೈಬಿಟ್ಟು, ಅವುಗಳಿಗೆ “ಪ್ರಧಾನ ಮಂತ್ರಿ” ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಯೋಜನೆಗಳನ್ನು 2026-27ರಿಂದ 2030-31ರವರೆಗೆ ಮುಂದಿನ ಐದು ವರ್ಷಗಳ ಕಾಲ ಮುಂದುವರಿಸಲು ಬರೋಬ್ಬರಿ 53,428 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

ಯಾವ ಯೋಜನೆಗೆ ಏನು ಹೊಸ ಹೆಸರು?
ಹಳೆಯ ಹೆಸರುಹೊಸ ಹೆಸರುರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ (NSAP)ಪ್ರಧಾನಮಂತ್ರಿ ಸಾಮಾಜಿಕ ಸಹಾಯತಾ ಯೋಜನೆ (PM-SSY),ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ (IGNOAPS), ಪ್ರಧಾನಮಂತ್ರಿ ವೃದ್ಧಾಪ್ಯ ಪಿಂಚಣಿ ಯೋಜನೆ (PM-OAP), ಇಂದಿರಾ ಗಾಂಧಿ ರಾಷ್ಟ್ರೀಯ ವಿಧವಾ ಪಿಂಚಣಿ ಯೋಜನೆ (IGNWPS), ಪ್ರಧಾನಮಂತ್ರಿ ವಿಧವಾ ಪಿಂಚಣಿ ಯೋಜನೆ (PM-WP),ಇಂದಿರಾ ಗಾಂಧಿ ರಾಷ್ಟ್ರೀಯ ಅಂಗವೈಕಲ್ಯ ಪಿಂಚಣಿ ಯೋಜನೆ (IGNDPS),ಪ್ರಧಾನಮಂತ್ರಿ ದಿವ್ಯಾಂಗಜನ ಪಿಂಚಣಿ ಯೋಜನೆ (PM-DP),ರಾಷ್ಟ್ರೀಯ ಕುಟುಂಬ ಪ್ರಯೋಜನ ಯೋಜನೆ (NFBS),ಪ್ರಧಾನಮಂತ್ರಿ ಕುಟುಂಬ ಪ್ರಯೋಜನ ಯೋಜನೆ.
