ಸ್ವಯಂ ಉದ್ಯೋಗದ ಯಶಸ್ವಿಗೆ ಆತ್ಮ ವಿಶ್ವಾಸ ಮುಖ್ಯ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಚಿತ್ರದುರ್ಗ ಜ. ೦೧
ಸ್ವ ಉದ್ಯೋಗದಲ್ಲಿ ಯಶಸ್ವಿಯಾಗಲು ಮೊದಲು ಆತ್ಮವಿಶ್ವಾಸವು ಅತೀ ಅವಶ್ಯ, ಆದ್ದರಿಂದ ಮೊದಲಿಗೆ ನಿಮ್ಮ ಸ್ವ ಸಾಮರ್ಥ್ಯ ಬಗ್ಗೆ ನಂಬಿಕೆಯನ್ನು ಇಟ್ಟುಕೊಂಡು ಕೆಲಸವನ್ನು ಪ್ರಾರಂಭಿಸಿ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕರಾಧ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.

 

 

ರುಡ್‌ಸೆಟ್ ಸಂಸ್ಥೆಯು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ಧನಶ್ರೀ, ಚೇತನ ಮತ್ತು ದೇವದಾಸಿಯರಿಗೆ ಪುನರ್‌ವಸತಿ ಯೋಜನೆ ಅಡಿಯಲ್ಲಿ ದಮನಿತ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಣೆ ಮಾಡಿ ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಅಂತಹ ಯೋಜನೆಗಳನ್ನು ಸದುಪಯೋಗಪಡೆದುಕೊಳ್ಳಿ ಜೊತೆಗೆ ಸರ್ಕಾರದ ಕಾರ್ಯಕ್ರಮಗಳಾದ ಮುದ್ರಾ ಯೋಜನೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ವಿಮಾಯೋಜನೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಿನಿ ಯೋಜನೆ, ಸುಕನ್ಯ ಸಮೃದ್ದÀ ಯೋಜನೆಗಳನ್ನು ಸದುಪಯೊಗ ಪಡಿಸಿಕೊಳ್ಳಿ ಎಂದು ಶಿಭಿರಾರ್ಥಿಗಳಿಗೆ ತಿಳಿಸಿದರು.
ಸರ್ಕಾರದ ಯೋಜನೆಗಳು ನೇರವಾಗಿ ಪಲಾನುಭವಿಗಳಗೆ ತಲುಪಿಸುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತಿವೆ ಮತ್ತು ಡಾ. ವಿರೇಂದ್ರ ಹೇಗ್ಗಡೆಯವರು ಗ್ರಾಮೀಣ ಜನರ ಒಳ್ಳಿತಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ. ರುಡ್‌ಸೆÀಟ್ ಸಂಸ್ಥೆಯು ಜಿಲ್ಲೆಯಲ್ಲಿ ಸ್ವ ಉದ್ಯೋಗವನ್ನು ಮಾಡಲು ತರಬೇತಿಯನ್ನು ನೀಡಿ ಉದ್ಯೋಗವನ್ನು ಮಾಡಲು ಸಹಕಾರಿಯಾಗಿದೆ ಎಂದು ತಿಳಿಸುತ್ತಾ ಜೊತೆಗೆ ಪಡೆದ ಸಾಲವನ್ನು ಆಯ್ದ ಚಟುವಟಿಕೆಗಳಿಗೆ ಬಳಸಿಕೊಂಡು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಿ, ತರಬೇತಿಯ ನಂತರ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಸರ್ಕಾರದ ಪ್ರೋತ್ಸಾಹ ಧನ ೩೦,೦೦೦/- ರೂಪಾಯಿಗಳು ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್‌ನ ಮ್ಯಾನೆಜರ್, ಕೃಷ್ಣಪ್ಪ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಶ್ರೀಮತಿ ಸುವರ್ಣಮ್ಮಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಜಿ.ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಸ್ಥೆಯ ಉಪನ್ಯಾಸಕರಾದ ಶ್ರೀಮತಿ ಲತಾಮಣಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು,. ತೋಟಪ್ಪ ಗಾಣಿಗೇರ ವಂದಿಸಿದರು. ಕುಮಾರಿ ಹಾಸಿನಿ ಕಾರ್ಯಕ್ರಮದಲ್ಲಿ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

[t4b-ticker]

You May Also Like

More From Author

+ There are no comments

Add yours