ಕೇಂದ್ರದ ನಿಯಮದಂತೆ 5 ವರ್ಷಕ್ಕೊಮ್ಮೆ ರೇಷನ್ ಕಾರ್ಡ್ ಇ-ಕೆವೈಸಿ ಕಡ್ಡಾಯವಾಗಿದ್ದು, ಕರ್ನಾಟಕದಲ್ಲಿ ಅರ್ಧಕ್ಕಿಂತ ಹೆಚ್ಚು ಕುಟುಂಬಗಳ ಪ್ರಕ್ರಿಯೆ ಬಾಕಿಯಿದೆ. ಹೀಗಾಗಿ ಕರ್ನಾಟಕ ಆಹಾರ ಇಲಾಖೆಯು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಕೊಳ್ಳಲು ‘ಅನ್ನಸೇವೆ’ ಆ್ಯಪ್ ಸೌಲಭ್ಯವನ್ನು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಹೀಗಾಗಿ ಮನೆಯಲ್ಲೇ ಕುಳಿತು ಮೊಬೈಲ್ನಲ್ಲಿ ಇಕೆವೈಸಿ ಪೂರ್ಣಗೊಳಿಸಬಹುದು. ಇದರ ಜೊತೆಗೆ ಇದೀಗ ಕೊನೆ ದಿನಾಂಕವನ್ನೂ ಸಹ ಮತ್ತೆ ವಿಸ್ತರಣೆ ಮಾಡಲಾಗಿದೆ.


ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅಕ್ಟೋಬರ್ 20 ಕೊನೆಯ ದಿನಾಂಕವನ್ನು ಇದೀಗ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಮಾಡಿಸಿ

ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿ ನಿಗದಿಯಾಗಿತ್ತು. ಆದ್ರೆ, ಇನ್ನೂ ಹಲವು ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 20ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಉಚಿತ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಕಾರ್ಡ್ ಕೂಡ ರದ್ದಾಗುವ ಸಾಧ್ಯತೆ ಇದೆ.
