ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಎದೆ ಸೋಂಕು ಮತ್ತು ಉಸಿರಾಟದ ಸಮಸ್ಯೆಯಿಂದ ಸಂಪೂರ್ಣ ಗುಣಮುಖರಾಗಿ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಕ್ಟೋಬರ್ 16ರಂದು ಆಸ್ಪತ್ರೆಗೆ ದಾಖಲಾಗಿದ್ದ 98 ವರ್ಷದ ಅಡ್ವಾಣಿ ಅವರಿಗೆ ಡಾ. ವಿನೀತ್ ಸೂರಿ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಯಿತು. ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಇವರು, ಇದೀಗ ಆರೋಗ್ಯವಾಗಿ ತಮ್ಮ ಮನೆಗೆ ಮರಳಿದ್ದಾರೆ.


ರಾಜಕೀಯ ಮೇರು ನಾಯಕ: ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ರಾಷ್ಟ್ರೀಯ ರಾಜಕೀಯ ಶಕ್ತಿಯಾಗಿ ಬೆಳೆಸಿದ ರೂವಾರಿಗಳಲ್ಲಿ ಅಡ್ವಾಣಿ ಪ್ರಮುಖರು. ಇವರು ವಾಜಪೇಯಿ ಅವರ ಸಂಪುಟದಲ್ಲಿ ಭಾರತದ 7ನೇ ಉಪ ಪ್ರಧಾನಿಯಾಗಿ (2002-2004) ಹಾಗೂ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ರಾಜಕಾರಣಕ್ಕೆ ಸಲ್ಲಿಸಿದ ಅಪ್ರತಿಮ ಸೇವೆಗಾಗಿ ಕೇಂದ್ರ ಸರ್ಕಾರವು 2024 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತರತ್ನ’ ನೀಡಿ ಅಡ್ವಾಣಿ ಅವರನ್ನು ಗೌರವಿಸಿದೆ.

